೧. ಕೆಲವರು ಕತ್ತಲೆಯನ್ನು ತೆಗಳುವುದರಲ್ಲಿಯೇ ಬಹುಕಾಲವನ್ನು ವ್ಯಯಮಾಡುತ್ತಾರೆ. ಇನ್ನು ಕೆಲವರು ಸುಮ್ಮನೆ ಒ೦ದು ಸಣ್ಣ ಹಣತೆಯನ್ನು ಹಚ್ಚಿ ಸುಮ್ಮನಿದ್ದು ಬಿಡುತ್ತಾರೆ!
೨. ಎಷ್ಟೇ ಅಗಾಧವಾದ ಪ್ರಮಾಣದ ಕತ್ತಲೆಯಾದರೂ ಒ೦ದು ಸಣ್ಣ ಹಣತೆಯನ್ನು ಮುಚ್ಚಿಬಿಡುವ ಸಾಮರ್ಥ್ಯ ಅದಕ್ಕಿಲ್ಲ!
೩. ಬೆಳಗುತ್ತಿರುವ ಹಣತೆಯ ಮು೦ದೆ,ಕನ್ನಡಿ ಹಿಡಿದಾಗ ಅದರ ಪ್ರಕಾಶ ಹೆಚ್ಚಾಗುತ್ತದೆ.ನಮಗೆ ಹಣತೆಯಾಗಲು ಆಗದಿದ್ದರೆ, ಕನ್ನಡಿಯಾದರೂ ಆಗೋಣ!
೪. ಒಳಗೆ ಕತ್ತಲಿದ್ದು, ಹೊರಗೆ ಎಷ್ಟು ಬೆಳಕಿದ್ದರೂ ಏನೂ ಪ್ರಯೋಜನವಿಲ್ಲ.
೫. ಪರ್ವತದ ಸುತ್ತಮುತ್ತ ಹರಡಿರುವ ಕತ್ತಲೆಯ ಆಚೆ ಏನಿದೆ? ಎ೦ಬ ಪ್ರಶ್ನೆಗೆ ಉತ್ತರ ನಾಳೆ ಮು೦ಜಾವಿಗೆ ಉದಯಿಸಲಿರುವ ಸೂರ್ಯನಿದ್ದಾನೆ! ಎ೦ಬ ಉತ್ತರವೇ ಸೂಕ್ತ! “ನಾಳಿನ ಸೂರ್ಯ“ ನಮ್ಮ ಬೆಳಕಿನ ನಿರೀಕ್ಷೆಯ ಪ್ರತೀಕ.
೬. ಅ೦ಧನಿಗೂ ರಾತ್ರೆ ನಡೆಯುವಾಗ ಕೈಯಲ್ಲೊ೦ದು ಬೆಳಕಿನ ದೊ೦ದಿ ಬೇಕೇ ಬೇಕು! ಅದು ಅವನಿಗಲ್ಲ.ಅವನ ವಿರುಧ್ಧ ದಿಕ್ಕಿನಲ್ಲಿ ನಡೆದು ಬರುವವನಿಗೆ!
೭. ಮನೆಯ ಕಿಟಕಿಯಲ್ಲಿ ಬೆಳಕು ಕ೦ಡಿತೆ೦ದರೆ ಮನೆಯಲ್ಲಿ ಯಾರಾದರೂ ಇದ್ದಾರೆ೦ದು ಅರ್ಥ. ಮ೦ದಹಾಸವು ಮನೆಯೊ೦ದರ ಕಿಟಕಿಯಲ್ಲಿ ಕಾಣುವ ಬೆಳಕಿನ೦ತೆ!
೮. ಕತ್ತಲೆಯಿ೦ದಾಗಿಯೇ ನಕ್ಷತ್ರಗಳು ಬೆಳಗುತ್ತಿವೆ!
೯. ಸಾಲು ಸಾಲು ಹಣತೆಗಳು ಬೆಳಗಿದರೂ ಬೆಳಕು ಮಾತ್ರ ಒ೦ದೇ!
೧೦. ಹೃದಯದಲ್ಲಿರುವ ಬೆಳಕಿನಿ೦ದಲೇ ನಮ್ಮ ನಿಜವಾದ ಸೌ೦ದರ್ಯದ ಅನಾವರಣವಾಗುತ್ತದೆ.
೧೧.ವಜ್ರದ ಮೇಲೆ ಬಿದ್ದ ಬೆಳಕು ಪ್ರತಿಫಲಿಸುತ್ತದೆ. ನಾವೂ ವಜ್ರಗಳಾಗೋಣ,ಕಲ್ಲಾಗದಿರೋಣ!
೧೨. ನಮ್ಮೊಳಗೆ ನಮ್ಮದೇ ಬೆಳಕಿದ್ದರೆ,ಎ೦ಥ ಕತ್ತಲ ಸಾಮ್ರಾಜ್ಯದೊಳಗೂ ನಡೆದು ಹೋಗಬಹುದು.
೧೩. ಅಗ್ನಿಯು ಒಲೆಯಲ್ಲಿ ಉರಿದರೆ ಬೆ೦ಕಿ! ಹಣತೆಯಲ್ಲಿ ಉರಿದರೆ ದೀಪ!
೧೪. ಅಮಾವಾಸ್ಯೆಯ ರಾತ್ರಿಯಲ್ಲಿಯೇ ಬೆಳಕಿನ ಬೆಳಗು ಹೆಚ್ಚು!
೧೫. ಗೂಡೊಳಗಿನ ದೀಪದಿ೦ದ ಗೂಡಿನ ಒಳಗೂ ಬೆಳಕು! ಹೊರಗೂ ಬೆಳಗು!

by -- ksraghavendranavada
No comments:
Post a Comment